ಬೆಂಗಳೂರು; ಮಳೆಗಾಲ ಕಳೆದು ಚಳಿಗಾಲ ಶುರುವಾಗಿದ್ದರೂ, ರಾಜ್ಯದಲ್ಲಿ ಮಳೆಯ ಅಬ್ಬರ ನಿಂತಿಲ್ಲ. ಚಳಿಗಾಲದಲ್ಲಿಯೂ ಕೆಲವು ಕಡೆ ಭಾರೀ ಮಳೆಯಾಗುತ್ತಿದೆ. ಇದರಿಂದ ಕೊಯ್ಲಿಗೆ ಬಂದ ರಾಗಿ, ಭತ್ತ ಬೆಳೆಗಾರರು ಸಂಕಷ್ಠಕ್ಕೆ ಸಿಲುಕಿದ್ದಾರೆ. ಇದೀಗ ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಸೃಷ್ಠಿಯಾಗಿದ್ದು, ಮುಂದಿನ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಡಿಸೆಂಬರ್ 14ರವರೆಗೂ ಮಳೆಯಾಗುವ ಸಾಧ್ಯತೆ ಇದೆ. ಕಳೆದ ವಾರ ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗಿತ್ತು. ಇದೀಗ ಹಿಂದೂ ಮಹಾಸಾಗರದಲ್ಲಿ ಮತ್ತೊಂದು ಚಂಡಮಾರುತ ಉಂಟಾಗುದೆ. ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದ್ದು, ಮತ್ತೆ ಮಳೆ ಶುರುವಾಗಿದೆ,
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಡಿಸೆಂಬರ್ 14ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಫೆಂಗಲ್ ಚಂಡಮಾರುತದ ಹಾನಿಯಿಂದ ಇದೀಗ ಸುಧಾರಿಸಿಕೊಳ್ಳುತ್ತಿರುವಾಗಲೇ ಮತ್ತೆರಡು ವಾಯುಭಾರ ಕುಸಿತ ಸೃಷ್ಟಿಯಾಗುವ ಲಕ್ಷಣ ಸಾಗರದಲ್ಲಿ ಕಂಡು ಬರುತ್ತಿದೆ. ಮೊದಲ ವಾಯುಭಾರ ಕುಸಿತ ಒಂದೆರಡು ದಿನದಲ್ಲಿ ತೀವ್ರ ಸ್ವರೂಪ ಪಡೆದು ಕಾಣಿಸಿಕೊಳ್ಳಲಿದ್ದು, ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿ.14-15ಕ್ಕೆ ಮಳೆಯಾಗಲಿದೆ. 2ನೇ ವಾಯುಭಾರ ಕುಸಿತ ಡಿ.16ರ ಬಳಿಕ ರೂಪುಗೊಳ್ಳಲಿದ್ದು, ಇದರಿಂದ ಡಿ.17-18ಕ್ಕೆ ರಾಜ್ಯದಲ್ಲಿ ಮಳೆಯಾಗಲಿದೆ.
ರೈತರಿಗೆ ಸಂಕಷ್ಟ: ರಾಜ್ಯದಲ್ಲಿ ಬಹುತೇಕ ಬೆಳೆಗಳು ಕಟಾವಿಗೆ ಬಂದಿದ್ದು, ರೈತರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಶಿವಮೊಗ್ಗ, ದಾವಣಗೆರೆ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯ ಭತ್ತ ಬೆಳೆಗಾರರು ತೀವ್ರ ಸಂಕಷ್ಟ ಎದುರಾಗಿದೆ. ಕೊಯ್ಲಿಗೆ ಬಂದ ಭತ್ತ ಕಟಾವಿಗೆ ಮಳೆ ಬಿಡುತ್ತಿಲ್ಲ. ಭತ್ತ ಬೆಳೆ ನೆಲಕ್ಕೆ ಬಿದಿದ್ದು, ರೈತರಿಗೆ ಸಂಕಷ್ಟ ಎದುರಾಗಿದೆ.