ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಮುಂದಿನ ಎರಡು ದಿನ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ತುಮಕೂರು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುಡುಗು ಸಹಿತ ಭಾರಿ ಮಳೆಯಾಗಿದೆ.
ಇನ್ನೂ ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಡಿ.12 ರಂದು ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.



