ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ ಮೂರು ದಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಒಳನಾಡಿನ ಹಲವು ಕಡೆ ದಟ್ಟ ಮಂಜು ಇರುವ ಸಾಧ್ಯತೆಯಿದೆ. ಡಿ.23ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಕೆಲವು ಕಡೆ ಮಳೆಯಾಗುವ ಸಾಧ್ಯತೆಯಿದೆ.
ಡಿ.24ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಕಡೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಎರಡ್ಮೂರು ದಿನ ಮೋಡ ಕವಿದ ವಾತಾವರಣ ಇತಲಿದ್ದು, ಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಇರುವ ಸಾಧ್ಯತೆ ಇದೆ.

 
		 
		 
		 
		 
			
 
                                
                             
