ಬೆಂಗಳೂರು: ರಾಜ್ಯಾದ್ಯಂತ ಬೇಸಿಗೆ ಬಿರು ಬಿಸಿಲು ಜೋರಾಗಿದ್ದು, ಬಿಸಿಲಿನ ತಾಪಮಾನಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಇದರ ಮಧ್ಯೆ ರಾಜ್ಯದ ಕೆಲ ಜಿಲ್ಲೆಯಲ್ಲಿ ಗುಡುಗು, ಮಿಂಚು, ಆಲಿಕಲ್ಲು ಸಹಿತ ಮಳೆ (rain) ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಾವಣಗೆರೆ: ಏ.5,6ರಂದು ಕೊಂಡಜ್ಜಿ ಕೆರೆಯಲ್ಲಿ ಜಲಸಾಹಸ ಕ್ರೀಡೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದಾವಣಗೆರೆ: ಟಿಸಿ ಬದಲಿಸಿಕೊಡಲು ರೈತನಿಂದ 10 ಸಾವಿರ ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಇಂಜಿನಿಯರ್
ಏಪ್ರಿಲ್ 2ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆ ಆಗಲಿದೆ. ಏ. 3ರಂದು ಕರಾವಳಿ ಮತ್ತು ಒಳನಾಡಿನ ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಸಹಿತ ಆಲಿಕಲ್ಲು ಮಳೆಯಾಗಲಿದೆ.
ಏಪ್ರಿಲ್ 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣ, ಉತ್ತರ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.



