ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟಿಸುತ್ತಿದೆ. ಇಂದು (ಏ.19) ಕೆಲವು ಜಿಲ್ಲೆಗಳಿಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ (rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಕೋಲಾರ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಧಾರವಾಡ, ಗದಗ, ಹಾವೇರಿ, ತುಮಕೂರು, ಹಾಸನ, ಚಿತ್ರದುರ್ಗ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಾಳೆಯಾಗುವ ಸಾಧ್ಯತೆ ಇದೆ.

ಮೋಡ ಕವಿದ ವಾತಾವರಣ ಉಂಟಾಗಿ ಹಠಾತ್ ಮಳೆಯ ಆರಂಭವಾಗಿ ಚಳಿಗಾಳಿ ಬೀಸಲಿದೆ. ವಿಜಯನಗರ, ದಾವಣಗೆರೆ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚಿನ ಉಷ್ಣಾಂಶ ಇರಲಿದೆ.

 

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts