ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ ತಿಂಗಳ ಬಿಸಿಲಿನ ತಾಪಮಾನಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ವಿಪರೀತ ತಾಪಮಾನ ತಗ್ಗಿಸಲು ರಾಜ್ಯದ ಕೆಲವು ಕಡೆ ಮುಂಗಾರು ಪೂರ್ವ ಮಳೆ (rain) ಅಬ್ಬರಿಸುತ್ತಿದೆ. ಈ ಮಳೆ ಇನ್ನೂ ನಾಲ್ಕೈದು ದಿನ ಕೆಲ ಜಿಲ್ಲೆಯಲ್ಲಿ ಅರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುಡುಗು, ಸಿಡಿಲು ಸಹಿತ ಮಳೆ
ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ 5 ದಿನ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಬಿರುಗಾಳಿ, ಗುಡುಗು, ಸಿಡಿಲಿನ ಆರ್ಭಟ ಜೊತೆ ಜೋರು ಮಳೆಯಾಗುವ ಸಾಧ್ಯತೆಯೂ ಇದೆ.
ಈ ಜಿಲ್ಲೆಗಳಲ್ಲಿ ಮಳೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗಲಿದೆ.
ಮಂಗಾರು ಬಿತ್ತನೆಗೆ ಸಿದ್ಧತೆ
ರಾಜ್ಯದಲ್ಲಿ ಬಿರು ಬಿಸಿಲಿನ ಮಧ್ಯೆಯೇ ಕೆಲವು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಉತ್ತಮ ಹದ ಮಳೆಯಾಗುತ್ತಿದೆ. ಇದರಿಂದ ಮಳೆ ಆಶ್ರಿತ ಪ್ರದೇಶದಲ್ಲಿ ಮುಂಗಾರಿನ ಬಿತ್ತನೆಗೆ ಜಮೀನನ್ನು ಹದ ಮಾಡುವ ಕಾರ್ಯ ಭರದಿಂದ ಸಾಗಿದೆ. ಇನ್ನೇನು ಮುಂದಿನ ತಿಂಗಳ ಕೊನೆ ಭಾಗ ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶ ಪಡೆಯಲಿದೆ. ಈ ಮಳೆಗೆ ಬಿತ್ತನೆಗೆ ಈಗಿನಿಂದಲೇ ರೈತರ ಹೊಲ ಸಿದ್ಧತೆಯಲ್ಲಿ ತೊಡಗಿದ್ದಾರೆ. ಈ ಬಾರಿ ಉತ್ತಮ ಮುಂಗಾರು ಮಳೆ ಮುನ್ಸೂಚನೆ ಸಿಕ್ಕಿದ್ದು, ರೈತರು ಹೊಸ ಭರವಸೆಯೊಂದಿಗೆ ಜಮೀನಿನ ಸಿದ್ಥತೆ ಮಾಡಿಕೊಳ್ಳುತ್ತಿದ್ದಾರೆ.



