Connect with us

Dvgsuddi Kannada | online news portal | Kannada news online

ಏ.6ರವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಪ್ರಮುಖ ಸುದ್ದಿ

ಏ.6ರವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಏಪ್ರಿಲ್ 6 ರವರೆಗೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಏ.6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಏ.03), ನಾಳೆ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ. ಬೆಂಗಳೂರು, ಮೈಸೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಕೋಲಾರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top