ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಎರಡ್ಮೂರು ದಿನ ಕೆಲವಡೆ ಭಾರೀ ಮಳೆಯಾಗುವ (rain) ಮುನ್ಸೂಚನೆ ನೀಡಿದೆ. ಕರ್ನಾಟಕದ ಒಳನಾಡಿನಲ್ಲಿ 1.5 ಕಿ.ಮೀ ಎತ್ತರದವರೆಗೆ ಟ್ರಫ್ ನಿರ್ಮಾಣವಾಗಿದ್ದು, ಇದರ ಪರಿಣಾಮ ಮೇ 5ರವರೆಗೆ ಸಾಧಾರಣದಿಂದ ಕೆಲವಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನ ಹಾಗೂ ಮಲೆನಾಡಿನಲ್ಲೂ ಧಾರಾಕಾರ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಚಿತ್ರದುರ್ಗ. ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ರಾಯಚೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಹಾಗೂ ಗದಗ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.
ತಾಪಮಾನ ಎಷ್ಟಿದೆ.?
ಮೇ 5ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಗಳಿವೆ. ಮಳೆಯ ಜೊತೆಗೆ ಬಿರುಗಾಳಿ 40 ಕಿ.ಮೀ ವೇಗದಲ್ಲಿ ಬೀಸಲಿದೆ.ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 42 ಡಿ.ಸೆ, ಬೀದರ್‌ನಲ್ಲಿ 41 ಹಾಗೂ ಬೆಂಗಳೂರಿನಲ್ಲಿ 34 ಡಿ.ಸೆ ಗರಿಷ್ಠ ಉಷ್ಣಾಂಶ ದಾಖಲಾಗಿದೆ.



