ಬೆಂಗಳೂರು: ಮುಂದಿನ 7 ದಿನ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಲ್ಕು ದಿನ ಕರಾವಳಿ ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ, ಉತ್ತರ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿಯೂ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಯ ಹಲವೆಡೆ ಭಾರಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.