Connect with us

Dvgsuddi Kannada | online news portal | Kannada news online

ಮೇ 22ರ ವರೆಗೆ ರಾಜ್ಯದಲ್ಲಿ‌ ಭಾರೀ ಮಳೆ ಮುನ್ಸೂಚನೆ

rain news 1

ಪ್ರಮುಖ ಸುದ್ದಿ

ಮೇ 22ರ ವರೆಗೆ ರಾಜ್ಯದಲ್ಲಿ‌ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮೇ 22ರ ವರೆಗೆ ರಾಜ್ಯದಲ್ಲಿ ಭಾರೀ ಪ್ರಮಾಣದ ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಯಲ್ಲಿ ಭಾರೀ ಮಳೆ ಸುರಿದಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣದಿಂದ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ದಾವಣಗೆರೆ, ಚಿತ್ರದುರ್ಗದಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಪ್ರದೇಶಗಳಲ್ಲಿ ಗಂಟೆಗೆ 50-60 ಕಿಮೀ ವೇಗದಲ್ಲಿ ಬಿರು ಗಾಳಿ ಬೀಸಲಿದೆ.

ಮುಂದಿನ ಏಳು ದಿನ ಈ ಎಲ್ಲಾ ಜಿಲ್ಲೆಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ಆಗ್ನೇಯ ಬಂಗಾಳ ಕೊಲ್ಲಿ, ಕರಾವಳಿ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಮೇಲೆ ವಾಯುಭಾರ ಚಂಡಮಾರುತ ಪರಿಣಾಮ ಮಳೆಯಾಗುತ್ತಿದೆ‌.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top