ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ಇನ್ನೂ ಎರಡ್ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಜಿಲ್ಲೆಗಳಲ್ಲಿ ರೆಡ್ ಅರ್ಲಟ್
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡ್ಮೂರು ದಿನದಿಂದ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮೇ19ರಿಂದ 2 ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದೇ ಜಿಲ್ಲೆಗಳಲ್ಲಿ 21ರಂದು ಭಾರಿ ಮಳೆ ಹಿನ್ನೆಲೆ ಹವಾಮಾನ ಇಲಾಖೆ ರೆಡ್ ಅರ್ಲಟ್ ನೀಡಲಾಗಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗದಲ್ಲಿ ಮೇ 20, 21ರಂದು ಆರೆಂಜ್ ಅಲರ್ಟ್ ನೀಡಲಾಗಿದೆ.ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಚಿತ್ರದುರ್ಗ, ಕೊಪ್ಪಳ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದೆಡೆ ಸಾಧಾರಣ ಮಳೆಯಾಗಲಿದೆ.ಆದರೆ ಆದರೆ ಆದರೆ ಆದರೆ ಈ ವೇಳೆ ಕೆಲ ಜಿಲ್ಲೆಗಳಲ್ಲಿ ಗಾಳಿ ವೇಗವೂ ಅಧಿಕವಾಗಿರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಬಿತ್ತನೆಗೆ ಪೂರಕ ವಾತಾವರಣ
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟದಿಂದ ಬಹುತೇಕ ಜಿಲ್ಲೆಗಳ ತಾಪಮಾನ ಕುಸಿತವಾಗಿದೆ. ಒಳ್ಳೆಯ ಹದ ಮಳೆಯಾಗಿದ್ದು, ಬಿತ್ತನೆಗೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಉತ್ತರ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ 40 ಡಿ.ಗ್ರಿ ವರೆಗೆದಾಖಲಾಗುತ್ತಿದ್ದ ಉಷ್ಣಾಂಶವು 33 ಡಿ.ಸೆ.ನಿಂದ 37 ಡಿ.ಸೆ.ವರೆಗೆ ಇಳಿಕೆಯಾಗಿದೆ. ದಕ್ಷಿಣ ಕರ್ನಾಟಕ, ಕರಾವಳಿ ವ್ತಾಪ್ತಿಯ ಪ್ರದೇಶಗಳಲ್ಲಿ 35-36ರ ಅಸುಪಾಸಿನಲ್ಲಿ ಕಂಡುಬರುತ್ತಿದ್ದ ತಾಪಮಾನವು 31-33 ಡಿ.ಸೆ.ದಾಖಲಾಗುತ್ತಿದೆ. ಮುಂಗಾರು ಪೂರ್ವ ಮಳೆಯಿಂದ ತಂಪಾದ ವಾತಾವರಣ ನಿರ್ಮಾಣವಾಗಿದೆ.