ಬೆಂಗಳೂರು: ಬಂಗಾಳ ಕೊಲ್ಲಿಯ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಇದರ ಪರಿಣಾಮ ರಾಜ್ಯದಲ್ಲಿ ಇನ್ನೂ ಎರಡ್ಮೂರು ದಿನ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ನೀಡಲಾಗಿದೆ.
ಬೆಳಗಾವಿ, ಹಾಸನ, ಧಾರವಾಡ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಹಗುರ ಮಳೆಯಾಗಲಿದೆ. ಎರಡ್ಮೂರು ದಿನದ ನಂತರ ಮಳೆ ತೀವ್ರತೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದಾರೆ.



