ಬೆಂಗಳೂರು: ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಏ. 6ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ 2 ದಿನ ಬೆಂಗಳೂರು, ಮೈಸೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ಕೋಲಾರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.