Connect with us

Dvgsuddi Kannada | online news portal | Kannada news online

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಮಳೆ ಮುನ್ಸೂಚನೆ

rain22

ಪ್ರಮುಖ ಸುದ್ದಿ

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ‌ ಕನ್ನಡ ಜಿಲ್ಲೆಯಲ್ಲಿ ಜೋರು ಮಳೆ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಾಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಜೂನ್‌ 2ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಜೂನ್ 3ರಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.‌ ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top