ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕು; ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಜೋರು ಮಳೆ ಮುನ್ಸೂಚನೆ

ಬೆಂಗಳೂರು: ಎರಡ್ಮೂರು ದಿನ ರಾಜ್ಯದಲ್ಲಿ (Karnataka) ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ (rain) ಎಂದು ಹವಾಮಾನ ಇಲಾಖೆ (metrology department) ಮುನ್ಸೂಚನೆ ನೀಡಿದೆ.‌ ಅದರಲ್ಲೂ ನಾಳೆ‌ಯಿಂದ (ಜೂನ್ 4) ಮುಂಗಾರು ಮಳೆ (monsoon rain) ಮತ್ತಷ್ಟು ಚುರುಕು‌ ಪಡೆಯಲಿದೆ.

ಇಂದು ಜೂ.3 ಎಲ್ಲೆಡೆ ಮೋಡ ಕವಿದ ವಾರಾವಣ ಇರಲಿದ್ದು ಹಗುರ ಮಳೆಯಾಗಲಿದೆ. ನಾಳೆ ( ಜೂನ್ 4 ) 15 ಕ್ಕೂ ಹೆಚ್ವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ನೀಎಒದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಎಲ್ಲೆಲ್ಲಿ ಮಳೆ ?

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಹಾವೇರಿ, ಧಾರವಾಡ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ.

ಜೂನ್‌ 5 ರಂದು ಈ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಉತ್ತರ ಒಳನಾಡುನ ಬೀದರ್, ಕಲಬುರಗಿ, ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಹಾವೇರಿ, ಬೆಳಗಾವಿ, ಧಾರವಾಡ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಮಗಳೂರು, ಕೋಲಾರ, ಕೊಡಗು, ಚಾಮರಾಜನಗರ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ಹಗುರ ಮಳೆ ಇದೆ.

 

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts