Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಜೂ.17ರವರೆ‌ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

rain22

ಪ್ರಮುಖ ಸುದ್ದಿ

ರಾಜ್ಯದಲ್ಲಿ ಜೂ.17ರವರೆ‌ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಜೂ. 17ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ವರು ಹೆಚ್ಚಿರಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಜೂ.12 ರಿಂದ 15ರವರೆಗೆ ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಿಗೆ ಮುಂದಿನ 4 ದಿನಗಳವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆ..?

ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಗದಗ, ಕೊಪ್ಪಳ, ಯಾದಗಿರಿ, ಕಲಬುರಗಿ, ರಾಯಚೂರು, ಬೀದರ್, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ರಾಮನಗರ, ಹಾಸನ ಮೈಸೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಮತ್ತು ಕೋಲಾರ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top