ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ (monsoon rain) ಮುಂದುವರೆದಿದ್ದು, ಇನ್ನೂ ಮೂರ್ನಾಲ್ಕು ದಿನ ಮಳೆ ಅಬ್ಬರಿದಲಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜೂ.16 ರಿಂದ 18ರ ವರೆಗೆ
ಭಾರತೀಯ ಹವಾಮಾನ ಇಲಾಖೆ ( IMD) ರೆಡ್ ಅಲರ್ಟ್ ಘೋಷಿಸಿದೆ.
ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು(ಜೂ.16) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ವಿಜಯನಗರ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.