ರಾಜ್ಯದಲ್ಲಿ ಕರಾವಳಿ ಹೊರತುಪಡಿಸಿ ಉಳಿದೆಡೆ ತಗ್ಗಿದ ಮಳೆ; ಬಿರುಗಾಳಿ ಮುಂದುವರಿಕೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಲಿದೆ.ಮುಂದಿನ ಒಂದು ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಅದರೆ, ಗಾಳಿಯ ವೇಗ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಈಗಾಲೇ ಕಳೆದ ಎರಡ್ಮೂರು ದಿನಗಳಿಂದ ಮಳೆಯ ಅಬ್ಬರ ಕಡಿಮೆಯಾಗಿದೆ. ಮುಂದಿನ ಒಂದು ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಾತ್ರ ಮಳೆ ಇರಲಿದೆ. ಗಾಳಿಯು ಕರಾವಳಿಯಲ್ಲಿ ಗಂಟೆಗೆ 30- 40 ಕಿ.ಮೀ. ವೇಗದಲ್ಲಿ ಬೂಸಲಿದ್ದು, ಒಳನಾಡು ಜಿಲ್ಲೆಗಳಲ್ಲಿ 40-50 ಕಿ.ಮೀ.ವೇಗದಲ್ಲಿ ಗಾಳಿ ಬೀಸಲಿದೆ.

ಜೂನ್ 20 ಮತ್ತು 21 ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts