ಮತ್ತೆ ಚುರುಕು ಪಡೆದ ಮುಂಗಾರು ಮಳೆ; ಜು.9ರ ವರೆಗೆ ಭಾರೀ ಮಳೆ ಮುನ್ಸೂಚನೆ- ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಕಳೆದ ಒಂದು ವಾರದಿಂದ ಸ್ವಲ್ಪ ಬಿಡುವು ನೀಡಿದ್ದ ಮುಂಗಾರು ಮಳೆ ರಾಜ್ಯಾದ್ಯಂತ ಮತ್ತೆ ಚುರುಕು ಪಡೆದಿದೆ. ಪೂರ್ವ ಅರಬ್ಬಿ ಸಮುದ್ರದ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕರಾವಳಿಯಾದ್ಯಂತ ಟ್ರಫ್ ಇದ್ದು, ಇದರ ಪರಿಣಾಮ ಕರಾವಳಿ, ಸೇರಿ ಒಳನಾಡಿನಲ್ಲಿ ಜುಲೈ 9ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಈ 8 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಯಾವ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್..?

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಯೆಲ್ಲೋ ಅಲರ್ಟ್ ಎಲ್ಲಿ..?

ಬೀದರ್‌, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು (ಜು.3) ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ, ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಜುಲೈ 9ರ ವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಭಾರೀ ಮಳೆ ಎಚ್ಚರಿಕೆ

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳ ಕೆಲವು ಕಡೆ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನ ಕೆಲವು ಕಡೆ ಜು. 5ರ ವರೆಗೆ ಸಾಧಾರಣ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ.ಬೆಂಗಳೂರು, ಮೈಸೂರು, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

 

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts