ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ; ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ‌ ತುಸು ಜೋರಾಗಿದೆ. ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಜುಲೈ 14ರವರೆಗೂ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಇಂದು (ಜುಲೈ 9) ಕರಾವಳಿ ಜಿಲ್ಲೆಗಳು, ಮಂಡ್ಯ, ಮೈಸೂರು, ಕೊಡಗು, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಕಲಬುರಗಿ, ಬೀದರ್ ಸೇರಿ 16 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ,ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts