ಬೆಂಗಳೂರು: ರಾಜ್ಯಾದಾದ್ಯಂತ ಕಳೆದ 10 ದಿನದಿಂದ ದುರ್ಬಲಗೊಂಡಿರುವ ಮುಂಗಾರು (monsoon) ಮಳೆ ಮತ್ತೆ ಚುರುಕುಗೊಂಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜು.19ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಪೂರ್ವ ಅರಬ್ಬಿ ಸಮುದ್ರದ ಕರಾವಳಿಯುದ್ದಕ್ಕೂ ಟ್ರಫ್ ನಿರ್ಮಾಣವಾಗಿದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 19ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಜು. 19ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜು.18ರ ವರೆಗೆ ಹಲವು ಕಡೆ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.