ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ (ಕರ್ನಾಟಕ) ಮುಂದಿನ 3 ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಹಾಗೂ ಒಳನಾಡು ಭಾಗದ ಕೆಲ ಜಿಲ್ಲೆಯಲ್ಲಿ ಜೋರು ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಅಮದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (KSNDMC) ಮಾಹಿತಿ ಪ್ರಕಾರ ಈ ಜಿಲ್ಲಾವಾರು ಮಳೆ ವಿವರ..
- ವ್ಯಾಪಕ ಮಳೆ: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಕೊಡಗು
- ಸಾಧಾರಣ ಮಳೆ: ಶಿವಮೊಗ್ಗ ಚಿಕ್ಕಮಗಳೂರು ಬೆಳಗಾವಿ ಮತ್ತು ಹಾವೇರಿ
- ಚದುರಿದಂತೆ ಮಳೆ: ದಾವಣಗೆರೆ
- ಹಗುರ ಮಳೆ: ಹಾಸನ, ಚಿತ್ರದುರ್ಗ, ಧಾರವಾಡ, ಯಾದಗಿರಿ, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ತುಮಕೂರು, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ವಿಜಯನಗರ, ಕಲ್ಪುರಗಿ, ಗದಗ, ಚಾಮರಾಜನಗರ, ವಿಜಯಪುರ, ಮೈಸೂರು, ಕೊಪ್ಪಳ, ರಾಯಚೂರು, ಕೋಲಾರ ಮತ್ತು ಮಂಡ್ಯ
- ಒಣಹವೆ: ರಾಮನಗರ, ಬೀದರ್ , ಬಳ್ಳಾರಿ



