ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಅಬ್ಬರಿಸುತ್ತಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡಿನಲ್ಲಿ ಜೋರು ಮಳೆಯಾಗುತ್ತಿದೆ. ಈ ಮಳೆ ಜು.28ರ ವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ..?
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಜೋರು ಮಳೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ಮಂಡ್ಯ, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳದಲ್ಲಿ ಸಾಧಾರಣ ಮಳೆಯಾಗಲಿದೆ.
ಇಂದಿನಿಂದ ಜು.28ರವರೆಗೆ ಜೋರಾಗಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ,ಕೊಡಗು ಮತ್ತು ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ನೀಡಿದೆ. ಬೆಳಗಾವಿ, ಧಾರವಾಡ, ಕಲಬುರಗಿ,ಬೀದರ್‌ನಲ್ಲಿ ಜು.24ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಇಲಾಖೆ ಎಚ್ಚರಿಕೆ ನೀಡಿದೆ.



