ಬೆಂಗಳೂರು; ರಾಜ್ಯದಲ್ಲಿ ಅ.5 ರವರೆಗೂ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಹೆಚ್ಚು ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಉಪಸಾಗರದಲ್ಲಿ ನಾಳೆಯೊಳಗೆ ವಾಯುಭಾರ ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಮೇಲೈ ಸುಳಿಗಾಳಿ ಉಂಟಾಗಿರುವುದರಿಂದ ಕರಾವಳಿ ಭಾಗದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಶಿವಮೊಗ್ಗ, ಯಾದಗಿರಿ, ಬಾಗಲಕೋಟೆ, ವಿಜಯನಗರ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ.
ಕಳೆದ ಎರಡ್ಮೂರು ದಿನದಿಂದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಹಗುರದಿಂದ ವ್ಯಾಪಕ ಮಳೆಯಾಗಿದೆ. ಕೆಲವಡೆ ಪ್ರವಾಹ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿ ಉಂಟಾಗಿದೆ.