Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ 18,19 ರಂದು ಹೆಚ್ಚು ಮಳೆಯಾಗಲಿದೆ.

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 17ರಂದು ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆ ಯೆಲ್ಲೋ ಅಲರ್ಟ್.

ಬೆಂಗಳೂರು, ಬೆಂ. ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆಯಲ್ಲಿ ಮುಂದಿನ 4 ದಿನ, ಬೀದರ್, ವಿಜಯಪುರ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಗದಗ, ಹಾವೇರಿ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top