ಬೆಂಗಳೂರು: ದೀರ್ಘಕಾಲಿಕ ಬಿಡುವಿನ ಬಂಗಾಳಕೊಲ್ಲಿಯಲ್ಲಿ ಮತ್ತೆ ಮಳೆ ಮಾರುತಗಳು ಚುರುಕುಗೊಂಡಿವೆ. ಮುಂದಿನ ಎರಡ್ಮೂರು ದಿನ ಬದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗುರುವಾರ, ಶುಕ್ರವಾರ ಭಾರೀ ಮಳೆ
ಮೇ ಕೊನೆಯ ವಾರ ಪಶ್ಚಿಮ ಕರಾವಳಿ ಮೂಲಕ ರಾಜ್ಯ ಪ್ರವೇಶಿಸಿದ್ದ ನೈರುತ್ಯ ಮುಂಗಾರು ಮಳೆ, ಇದೀಗ ಮತ್ತೆ ಆಕ್ಟಿವ್ ಆಗಿದೆ. ಒಡಿಶಾ ರಾಜ್ಯದಿಂದ ಮಳೆ ಮಾರುತಗಳು ರಾಜ್ಯಕ್ಕೆ ಪ್ರವೇಶ ಪಡೆದಿವೆ. ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಎಲ್ಲೆಲ್ಲಿ ಮಳೆ..?
ಗುರುವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ ಹಾಗೂ ತುಮಕೂರು, ಶುಕ್ರವಾರಕ್ಕೆ ಕೋಲಾರ, ಕೊಡಗು, ಹಾಸನ, ಚಿಕ್ಕಮಂಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.