ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 15ರವರೆಗೆ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮಗ್ಗದಲ್ಲಿ ಹೆಚ್ಚು ಮಳೆಯಾಗಲಿದೆ. ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೆ.15ರವರೆಗೂ ಮಳೆಯ ಅಬ್ಬರ ಮುಂದುವರೆಯಲಿದೆ.
ಶಿವಮೊಗ್ಗ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಕಳದೆ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇದೆ 15ರವರೆಗೂ ಮಳೆ ಮುಂದುವರೆಯಲಿದೆ ಎಂದು ಭಾರತಿಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಮುಖವಾಗಿ ಕರಾವಳಿ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇತ್ತ ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.