Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ;7 ಜಿಲ್ಲೆಯಲ್ಲಿ ರೆಡ್-ದಾವಣಗೆರೆ ಯೆಲ್ಲೋ ಅಲರ್ಟ್ ..!

ಪ್ರಮುಖ ಸುದ್ದಿ

ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ;7 ಜಿಲ್ಲೆಯಲ್ಲಿ ರೆಡ್-ದಾವಣಗೆರೆ ಯೆಲ್ಲೋ ಅಲರ್ಟ್ ..!

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯ ಅಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮೇ 19ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್‌’ ಹಾಗೂ ತುಮಕೂರು, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿಯಲ್ಲಿ60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ. ಮೇ 21ರ ಬಳಿಕ ರಾಜ್ಯದಾದ್ಯಂತ ಮಳೆ ತಗ್ಗಲಿದೆ ಎಂದು ಮಾಹಿತಿ ನೀಡಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top