ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಒತ್ತಡ ಪ್ರದೇಶ ಉಂಟಾದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಚಳಿ ಸಹ ಮುಂದುವರೆದಿದೆ. ಇದನ್ನೂ ಓದಿ:ದಾವಣಗೆರೆಯ ಡಾ.ಸುರೇಶ್ ಹನಗವಾಡಿಗೆ ಪ್ರತಿಷ್ಠಿತ ‘ಪದ್ಮಶ್ರೀ’
ತಮಿಳುನಾಡಿನಿಂದ ಬಂಗಾಳಕೊಲ್ಲಿಯ ನೈಋತ್ಯ ಭಾಗ ಮತ್ತು ಶ್ರೀಲಂಕಾಕ್ಕೆ ಹೊಂದಿಕೊಂಡಿರುವ ಪೂರ್ವ ದಿಕ್ಕಿನಲ್ಲಿರುವ ವಾಯುಭಾರ ಕುಸಿತದಿಂದ ಕೊಮೊರಿನ್ ಪ್ರದೇಶದಿಂದ ಉತ್ತರ ಕೇರಳ ಕರಾವಳಿಯವರೆಗೆ ಅರೇಬಿಯನ್ ಸಮುದ್ರದಾದ್ಯಂತ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದ್ದು, ಮಳೆಯಾಗುವ ಸಾಧ್ಯತೆ ಇದೆ.
ಸರ್ಕಾರದ ಐದು ಗ್ಯಾರಂಟಿಗಿಂತ ಜನರಿಗೆ ದುಡಿಯುವ ಗ್ಯಾರಂಟಿ ನೀಡಿ; ತರಳಬಾಳು ಶ್ರೀ
ಎಲ್ಲೆಲ್ಲಿ ಮಳೆ…?
ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರಗಳಲ್ಲಿ ಮಳೆಯಾಗಲಿದೆ. ಬೆಂಗಳೂರಲ್ಲಿ ಚದುರಿದ ಮಳೆ ನಿರೀಕ್ಷೆ ಇದೆ. ಇನ್ನೂ ಬಳ್ಳಾರಿ, ಬೆಂಗಳೂರು ಗ್ರಾಮೀಣ ಪ್ರದೇಶ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯ ನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.



