ಬೆಂಗಳೂರು: ದುರ್ಬಲಗೊಂಡಿರುವ ನೈಋತ್ಯ ಮುಂಗಾರು ರಾಜ್ಯದಲ್ಲಿ ಇನ್ನಷ್ಟು ಪ್ರಬಲಗೊಳ್ಳಲಿದ್ದು, ಮುಂದಿನ 48 ಗಂಟೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಜೂನ್ 20 ರಿಂದ 24 ರವರೆಗೆ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಬೀಳುವ ಸಾಧ್ಯತೆಗಳಿವೆ.ಈ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿಯೂ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಸಣ್ಣ ಮಳೆ ಬೀಳಲಿದೆ. ಇನ್ನೂ ಜೂನ್ ೨೩ರ ನಂತರ ದೇಶಾದ್ಯಂತ ಮುಂಗಾರು ಚುರುಕುಗೊಳ್ಳಲಿದೆ ಎಂದು ಅಂದಾಜಿಸಲಾಗಿದೆ.
ಜೂನ್ ತಿಂಗಳಲ್ಲಿ ಸುರಿಯತ್ತಿದ್ದ ಮಳೆ ಈ ಬಾರಿ ಕೊಂಚ ವಿಳಂಭವಾಗಿದೆ. ಮುಂದಿನ 48ಗಂಟೆಗಳಲ್ಲಿ 9ಕ್ಕೂ ಹೆಚ್ಚು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.



