Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ; ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್

ಪ್ರಮುಖ ಸುದ್ದಿ

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ; ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಾವಣಗೆರೆ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ಬುಧವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಜಾರಿ ಮಾಡಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top