ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಮುಂದಿನ ನಾಲ್ಕು ದಿನಗಳಲ್ಲಿ ಮಳೆಯ ಅಬ್ಬರ ತಗ್ಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗೆ ಇಂದು (ಜು.15) ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಹೊರತುಪಡಿಸಿ, ಉಳಿದ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



