Connect with us

Dvgsuddi Kannada | online news portal | Kannada news online

ಮುಂದುವರೆದ ಮಳೆ ಅಬ್ಬರ: 7 ಜಿಲ್ಲೆಯಲ್ಲಿ ಆರೆಂಜ್; ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್

ಪ್ರಮುಖ ಸುದ್ದಿ

ಮುಂದುವರೆದ ಮಳೆ ಅಬ್ಬರ: 7 ಜಿಲ್ಲೆಯಲ್ಲಿ ಆರೆಂಜ್; ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. 7 ಜಿಲ್ಲೆಯಲ್ಲಿ ಆರೆಂಜ್ ಹಾಗೂ ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ನಿನ್ನೆ ತಡ ರಾತ್ರಿ ಭಾರೀ ಮಳೆಯಾಗಿದೆ.

ಇಂದಿನಿಂದ ಆಗಸ್ಟ್​ 2ರವರೆಗೆ ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದೆ. ಹಾಗೇ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ. ಹೀಗಾಗಿ, ಮಲೆನಾಡು ಮತ್ತು ಕರಾವಳಿಯ 7 ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಬೆಳಗಾವಿ, ಧಾರವಾಡ, ಗದಗ ಬಳ್ಳಾರಿ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ಕರಾವಳಿಯಲ್ಲಿ ಇನ್ನೂ 5 ದಿನ ಗಾಳಿಯ ವೇಗ ಹೆಚ್ಚಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top