ಬೆಂಗಳೂರು: ರಾಜ್ಯದಲ್ಲಿ ಸತತ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ಎಲ್ಲಡೆ ನೀರು ಉಕ್ಕಿ ಹರಿಯುತ್ತಿದೆ. ರೈತರು ಬೆಳೆದ ಬೆಳೆಗಳು ನೀರಿನಲ್ಲಿ ಮುಳುಗಿ ಹೋಗಿವೆ. ಇನ್ನೂ ನಿಲ್ಲದ ಮಳೆ ಅಬ್ಬರ, ಮುಂದಿನ ಎರಡ್ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡಿನ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಇಂದು ಮತ್ತು ನಾಳೆ ಅತಿ ಹೆಚ್ಚು ಮಳೆಯಾಗಲಿದೆ. ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೈಸೂರು, ಬೆಂಗಳೂರು, ಕೋಲಾರ, ಹಾಸನ, ಬಾಗಲಕೋಟೆ, ವಿಜಯಪುರ, ಹಾವೇರಿ, ಬೆಳಗಾವಿ, ಗದಗ, ಧಾರವಾಡ, ಬಳ್ಳಾರಿ, ರಾಯಚೂರು, ಕಲಬುರಗಿ, ಚಿತ್ರದುರ್ಗ ಮತ್ತು ಬೀದರ್ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ನೀಡಲಾಗಿದೆ.