ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಈ ಬಾರಿಯ ನೈರುತ್ಯ ಮುಂಗಾರು ಮಳೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಎಡೆಬಿಡದೆ ಸುರಿಯುತ್ತಿದೆ. ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಎರಡು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ ಹಾಗೂ ದಕ್ಷಿಣ ಒಳನಾಡಿನ ಹಾಸನ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ಎರಡು ದಿನ ಆರೆಂಜ್ ಅಲರ್ಟ್’ಲ ಘೋಷಿಸಲಾಗಿದೆ.ಹಾಸನ, ಶಿವಮೊಗ್ಗ, ಬೆಳಗಾವಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗೆ ‘ಯೆಲ್ಲೋ ಅಲರ್ಟ್ ನೀಡಲಾಗಿದೆ.ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಸಾಧಾರಣ ಮಳೆಯಾಗಲಿದೆ.

 
		 
		 
		 
		 
		 
			
 
                                
                             
