ಬೆಂಗಳೂರು: ರಾಜ್ಯಾದ್ಯಂತ ಕಳೆದ 15 ದಿನದಿಂದ ಎಡೆಬಿಡದೆ ಸುರಿಯುತ್ತಿದ್ದ ಮಳೆ, ನ ಇದೀಗ ಇಳಿಮುಖವಾಗಿದೆ. ಈ ಅಬ್ಬರ ಆ.13ರಿಂದ ಇನ್ನಷ್ಟು ತಗ್ಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಲ್ಲಿ ರೆಡ್ ಅಲರ್ಟ್ ನಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಆ.13ರ ವರೆಗೆ ಎಲ್ಲೋ ಅಲರ್ಟ್ ನೀಡಲಾಗಿದೆ.ಭಾರೀ ಮಳೆ ಸುರಿಯುತ್ತಿದ್ದ ಕರಾವಳಿಯಲ್ಲಿ ಅಬ್ಬರ ತಗ್ಗಿದೆ.
ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಬುಧವಾರ ಆರೆಂಜ್ ಅಲರ್ಟ್ ನೀಡಿದ್ದು, ಆ.11 ಮತ್ತು 12ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಬುಧವಾರ ಮತ್ತು ಗುರುವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಯಾವುದೇ ಅಲರ್ಟ್ ನೀಡಲ್ಲ.



