Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

rain22

ಪ್ರಮುಖ ಸುದ್ದಿ

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದುಕೊಂಡಿದೆ. ಮುಂದಿನ ಮೂರು ದಿನ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಕರ್ನಾಟಕ ರಾಜ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ತುಮಕೂರು, ಬಳ್ಳಾರಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ. 64.5 ಮಿಲಿ ಮೀಟರ್ ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದಾಗ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡುತ್ತದೆ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top