Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ‌ ನಾಲ್ಕೈದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈರುತ್ಯ ಮುಂಗಾರು ಚುರುಕಾಗಿರುವ ಹಿನ್ನೆಲೆ ರಾಜ್ಯದಲ್ಲಿ ಇನ್ನು 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರವಾಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿಗೂ ಹವಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯಾತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಹಾಸನ,ಚಿತ್ರದುರ್ಗ, ಬಳ್ಳಾರಿ, ಚಿಕ್ಕಮಗಳೂರು. ಆ.28 ರಂದು ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಚಾಮರಾಜನಗರ.‌ ಆ. 29 ರಂದು ಚಿಕ್ಕಮಗಳೂರು, ಮಂಡ್ಯ, ಮೈಸೂರು,ಕೋಲಾರ, ಚಾಮರಾಜನಗರ. ಆ.30ರಂದು ಸಹ ಭಾರೀ‌ ಮಳೆ ಆಗಲಿದೆ.

ನಿನ್ನಿ ರಾತ್ರಿ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗಿದೆ. ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಟ್ರಫ್ ಸಹ ಇದ್ದು, ಇನ್ನು ಐದು ದಿನ ಹೆಚ್ಚು ಮಳೆಯಾಗುವ ಸಾಧ್ಯಾತೆ ಇದೆ ಎಂದು ತಿಳಿಸಿದ್ದಾರೆ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top