ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಭಾರೀ ಮಳೆ ಮಳೆಯಾಗುವ ನಿರೀಕ್ಷೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಲಿದೆ. ಮಂಗಳೂರು, ಉತ್ತರ ಕನ್ನಡ, ಉಡುಪಿ, ಕಾರವಾರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆಯಾಗಲಿದೆ. ಈ ಮಳೆ ಎರಡ್ಮೂರು ದಿನ ರವರೆಗೂ ಮುಂದುವರಿಯಲಿದೆ ಎಂದು ತಿಳಿಸಿದೆ.
ಕರಾವಳಿಯ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.



