ಬೆಂಗಳೂರು: ರಾಜ್ಯದಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಮನೆ, ಜಮೀನುಗಳಿಗೆ ನೀರು ನುಗ್ಗಿ ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆ ನಷ್ಟವಾಗಿದೆ. ಈ ಮಳೆ ಇನ್ನೂ ಎರಡು ದಿನ ಮುಂದುವರೆಯಲಿದ್ದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.



