Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಇಂದು, ನಾಳೆ ಅಬ್ಬರಿಸಲಿರುವ ಶಾಹೀನ್ ಚಂಡ ಮಾರುತ; ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ..!

ಪ್ರಮುಖ ಸುದ್ದಿ

ರಾಜ್ಯದಲ್ಲಿ ಇಂದು, ನಾಳೆ ಅಬ್ಬರಿಸಲಿರುವ ಶಾಹೀನ್ ಚಂಡ ಮಾರುತ; ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ..!

ಬೆಂಗಳೂರು:  ಶಾಹೀನ್ ಚಂಡಮಾರುತದ ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಅಬ್ಬರಿಸಲಿದ್ದು, ಇಂದು (ಆ.05) ಮತ್ತು ನಾಳೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾಣ ಇಲಾಖೆ ಮುನ್ಸೂಚನೆ ನೀಡಿದೆ.

ಎರಡಿ ದಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಗಳಲ್ಲಿ ಆರೆಂಜ್ ಅಲರ್ಟ್ ಹಾಗೂ  ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡಿನ ವ್ಯಾಪ್ತಿಯ ಕಲಬುರಗಿ, ಬೀದರ್, ವಿಜಯಪುರ, ರಾಯಚೂರು, ಯಾದಗಿರಿ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಯಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ, ಬಳ್ಳಾರಿ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ಸೋಮವಾರ ಸಹ ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ, ದಾವಣಗೆರೆ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.  ಹರಿಹರದಲ್ಲಿ ಸತತ ಎರಡು ಗಂಟೆ  ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top