ಬೆಂಗಳೂರು; ರಾಜ್ಯದ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮೆಕ್ಕೆಜೋಳ ಬೆಳೆ ಸೇರಿದಂತೆ ಮುಂಗಾರು ಹಂಗಾಮಿನ ಬೆಳೆ ಕಟಾವು ಮಾಡುವ ರೈತರು ಎಚ್ಚರಿಕೆ ವಹಿಸಬೇಕಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆಯಾಗುತ್ತಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



