ಬೆಂಗಳೂರು: ರಾಜ್ಯದ ಕೆಲವು ಕಡೆ ಇದೀಗ ತುಂತುರು ಮಳೆಯಾಗುತ್ತಿದೆ. ಮೋಡ ಕವಿದ ಕಾರಣ ನವೆಂಬರ್ 22 ರಿಂದ ವಾತಾವರಣ ತಂಪಾಗಿದೆ. ತುಂತುರು ಮಳೆಯಿಂದ ರೈತರ ಮುಂಗಾರು ಬೆಲೆ ಕೊಯ್ಲಿಗೆ ತೊಂದರೆ ಉಂಟಾಗಿದೆ. ಈ ಮಳೆ ರಾಜ್ಯದಲ್ಲಿ ಇನ್ನೂ ಮೂರು ದಿನ ಮುಂದುವರೆಯಲಿದೆ ಎಅಮದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವಡೆ ಮಳೆಯಾಗ್ತಾ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ,ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.



