ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾದ ಮಾಂಡೌಸ್ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ.
ಡಿಸೆಂಬರ್ 11 ಹಾಗೂ 12ರಂದು ಕರ್ನಾಟಕ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು, ಮಿಂಚಿನ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.ಡಿಸೆಂಬರ್ 12ರವರೆಗೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಇಂದು ರಾತ್ರಿ ತಮಿಳುನಾಡಿನ ಉತ್ತರ, ಪುದುಚೇರಿ ಮತ್ತು ಆಂಧ್ರಪ್ರದೇಶದ ಶ್ರೀಹರಿಕೋಟಾದ ತೀರ ಪ್ರದೇಶಗಳನ್ನು ಚಂಡ ಮಾರುತ ಸ್ಪರ್ಶಿಸಲಿದೆ.ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಯಿದ್ದು, ಮೋಡ ಕವಿದ ವಾತಾವರಣ ಇರಲಿದೆ.
ದಕ್ಷಿಣ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಕೋಲಾರ, ಮೈಸೂರು, ತುಮಕೂರು ಮತ್ತು ಉತ್ತರ ಕರ್ನಾಟಕದ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.



