ಬೆಂಗಳೂರು: ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮಾಂಡೌಸ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದು, ಪರಿಣಾಮ ಕರ್ನಾಕದ ಹಲವು ಜಿಲ್ಲೆಗಳಲ್ಲಿ ಗಾಳಿ, ಚಳಿ ಸಹಿತ ಮಳೆಯಾಗುತ್ತಿದೆ.
ಚಿಕ್ಕಮಗಳೂರು, ಕೋಲಾರ, ಮೈಸೂರು, ತುಮಕೂರು ಮತ್ತು ಉತ್ತರ ಕರ್ನಾಟಕದ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮೂರು ದಿನ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ.
ಡಿಸೆಂಬರ್ 11 ಹಾಗೂ 12ರಂದು ಕರ್ನಾಟಕ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು, ಮಿಂಚಿನ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.ಡಿಸೆಂಬರ್ 12ರವರೆಗೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಗಾಳಿ-ಮಳೆ ಮುಂದುವರೆಯಲಿದೆ.



