Connect with us

Dvgsuddi Kannada | online news portal | Kannada news online

ದಾವಣಗೆರೆ ಸೇರಿ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಪ್ರಮುಖ ಸುದ್ದಿ

ದಾವಣಗೆರೆ ಸೇರಿ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ದಾವಣಗೆರೆ, ಚಿತ್ರದುರ್ಗ ಬೆಂಗಳೂರು, ಮಂಗಳೂರು ಸೇರಿ ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.

ಬುಧವಾರ ದಾವಣಗೆರೆಯ ಹೊನ್ನಾಳಿ, ಚನ್ನಗಿರಿ ತಾಲ್ಲೂಕಿನಲ್ಲಿ ಮಳೆಯಾಗಿದೆ. ಹಾಗೆಯೇ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಚಿಕ್ಕಮಗಳೂರಿನ ಜಯಪುರದಲ್ಲಿ 3, ಬಾಳೆಹೊನ್ನೂರು 2, ಉತ್ತರಕನ್ನಡದ ಜನಮನೆ, ಕೊಡಗಿನ ಸುಂಟಿಕೊಪ್ಪ, ಶಿವಮೊಗ್ಗದ ಹುಂಚದ ಕಟ್ಟೆಯಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top