ಬೆಂಗಳೂರು; ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ, ರಾಮನಗರ, ಕೋಲಾರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಧ್ಯಪ್ರದೇಶದಿಂದ ತಮಿಳುನಾಡಿನಲ್ಲಿ ಗಾಳಿಯ ದಿಕ್ಕಿನ ಬದಲಾವಣೆ ಹಿನ್ನೆಲೆ ಮೂನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.
ಇನ್ನೂ ನಿನ್ನೆ ಸಂಜೆ ಬೆಂಗಳೂರಲ್ಲಿ ದಿಢೀರ್ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರದ ನೆಲಮಂಗಳ ಸುತ್ತಮುತ್ತ ಗುಡುಗು ಸಹಿತ ಭಾರೀ ಮಳೆಯಾಗಿದೆ.ಭಾರೀ ಬಿಸಿಲಿನ ತಾಪಮಾನಕ್ಕೆ ತತ್ತರಿಸಿದ ಜನರಿಗೆ ದಿಢೀರ್ ಮಳೆಯಿಂದ ತಂಪೆರೆದಂತಾಗಿದೆ.



