Connect with us

Dvgsuddi Kannada | online news portal | Kannada news online

ದಾವಣಗೆರೆ ಸಹಿತ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಎರಡು ದಿನ ಮಳೆ ಸಾಧ್ಯತೆ

ಪ್ರಮುಖ ಸುದ್ದಿ

ದಾವಣಗೆರೆ ಸಹಿತ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಗದಗ, ಧಾರವಾಡ, ಬಾಗಲಕೋಟೆ, ಕಲಬುರಗಿ, ವಿಜಯಪುರದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆ ಸಾಧ್ಯತೆ ಇದ್ದು, ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ತಲುಪುವ ಸಾಧ್ಯತೆ ಇದೆ. ಬೆಂಗಳೂರಿಗೆ ಯಾವುದೇ ಮಳೆಯ ಮುನ್ಸೂಚನೆಯಿಲ್ಲ. ಗರಿಷ್ಠ ಉಷ್ಣಾಂಶ 35, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 41.5 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top