ಬೆಂಗಳೂರು; ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರದಲ್ಲಿ ಗುಡುಗು ಸಹಿತ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ. 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಗಾಳಿಯ ದಿಕ್ಕಿನಲ್ಲಿ ಬದಲಾವಣೆ(ಟ್ರಫ್) ಹಿನ್ನೆಲೆಯಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಯ ವಿವಿಧ ಕಡೆ ಮಳೆಯಾದ ವರದಿಯಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಾತ್ರವಲ್ಲದೆ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಬೆಳಗಾವಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಮತ್ತು ಈ ಭಾಗಗಳಲ್ಲಿ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಈ ಬಯಲು ಪ್ರದೇಶದಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾಗಿದೆ. ಕಲಬುರಗಿಯಲ್ಲಿ ಗರಿಷ್ಠ 40.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಬಿಸಿಲಿನ ಬೇಗೆಗೆ ಸಾರ್ವಜನಿಕರು ತತ್ತರಿಸಿದ್ದಾರೆ.



