Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಅ.17 ವರೆಗೆ ಅಬ್ಬರಿಸಲಿರುವ ವರುಣ; ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ..!

ದಾವಣಗೆರೆ

ರಾಜ್ಯದಲ್ಲಿ ಅ.17 ವರೆಗೆ ಅಬ್ಬರಿಸಲಿರುವ ವರುಣ; ದಾವಣಗೆರೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ..!

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 17ರವರೆಗೆ ಭಾರಿ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹಾಗೂ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಿಗೂ ಸಹ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮಿಂಚು ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ದಾವಣಗೆರೆಯಲ್ಲಿ ನಿನ್ನೆ ರಾತ್ರಿ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಸತತ ಎರಡು ಗಂಟೆ ಭಾರೀ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top